ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ

ದಾವಣಗೆರೆ, ಸೆ. 3- 2023-24ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಂಸ್ಕೃತಿ, ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಪ್ರತಿಭೆಯ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪ್ರಮಾಣೀಕರಿಸಿರಬೇಕು.    5 ರಿಂದ 18 ವರ್ಷದ ವಯೋಮಾನದವರಾಗಿರಬೇಕು. ಪ್ರತಿಭೆಯುಳ್ಳ ಮಕ್ಕಳಿಗೆ ರೂ.10,000 ನಗದು ಬಹುಮಾನ ಹಾಗೂ ಪ್ರಶಸ್ತಿ ನೀಡಲಾಗುತ್ತದೆ.

ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಛೇರಿ, ಸರ್ಕಾರಿ ಬಾಲಕರ ಬಾಲ ಮಂದಿರ ಆವರಣ, ಎಂ.ಸಿ.ಸಿ ಬಿ ಬ್ಲಾಕ್, ಕುವೆಂಪು ನಗರ, ದಾವಣಗೆರೆ ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಇದೇ ದಿನಾಂಕ 16ರೊಳಗಾಗಿ ಅದೇ ಕಛೇರಿಗೆ ಸಲ್ಲಿಸಬೇಕು.

ವಿವರಕ್ಕೆ ದೂರವಾಣಿ 08192-264056ಗೆ ಸಂಪರ್ಕಿಸ ಬಹುದೆಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.

error: Content is protected !!