ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷಾ ಮಾದರಿ ಬದಲಾವಣೆಗೆ ಎಐಡಿಎಸ್‌ಓ ಸ್ವಾಗತ

ದಾವಣಗೆರೆ, ಸೆ. 5- ರಾಜ್ಯ ಸರ್ಕಾರವು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಮಾದರಿಯನ್ನು ಬದಲಾವಣೆ ಮಾಡಿರುವುದನ್ನು ಎಐಡಿಎಸ್‌ಓ ಸಂಘಟನೆ ಸ್ವಾಗತಿಸಿದೆ.

ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪ್ರತಿಕ್ರಿಯಿಸಿ, 10 ಮತ್ತು 12 ನೇ ತರಗತಿಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ಮತ್ತು ಅದರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಎಂಬ ಮಾದರಿಯನ್ನು ಕೈಬಿಟ್ಟು ನಂ. 1, 2. 3 ಮಾದರಿಯಲ್ಲಿ ಪರೀಕ್ಷೆ ನಡೆಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಸರ್ಕಾರದ ಈ ನಿರ್ಧಾರವನ್ನು ಎಐಡಿಎಸ್‌ಓ ಸ್ವಾಗತಿಸುವುದಾಗಿ ತಿಳಿಸಿದ್ದಾರೆ.

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಮೇಲೆ ಉಂಟಾಗುವ ಒತ್ತಡವನ್ನು ಮತ್ತು ಅನುತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಉಂಟಾಗುವ ಮಾನಸಿಕ ತಳವಳವನ್ನು ನಿವಾರಿಸಲು ಇದು ಸಹಕಾರಿಯಾಗಬಹುದು ಎಂದು ಹೇಳಿದ್ದಾರೆ.

ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರನ್ನು ಒಳಗೊಂಡ ಪ್ರಜಾತಾಂತ್ರಿಕ ಪ್ರಕ್ರಿಯೆ ಮುಖಾಂತರ ಈ ನಿರ್ಧಾರವನ್ನು ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದ್ದಾರೆ. 

error: Content is protected !!