ದಾವಣಗೆರೆ, ಸೆ.6- ಜಗಳೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಟಿ. ಗುರುಸಿದ್ದನಗೌಡ ಮತ್ತು ಅವರ ಪುತ್ರರಾದ ಟಿ.ಜಿ. ಅರವಿಂದಕುಮಾರ್, ಟಿ.ಜಿ. ಪವನಕುಮಾರ್ ಹಾಗೂ ಡಾ.ಟಿ.ಜಿ. ರವಿಕುಮಾರ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡಿ ಅಲ್ಪಮತದ ಅಂತರದ ಸೋಲಿಗೆ ಕಾರಣರಾಗಿದ್ದು ಮತ್ತು ನಿರಂತರ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಕಾರಣ ರಾಜ್ಯ ಬಿಜೆಪಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷರ ಸೂಚನೆ ಹಾಗೂ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಮುಂದಿನ 6 ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತರಾಜ್ ಪಾಟೀಲ್ ತಿಳಿಸಿದ್ದಾರೆ.