ನಗರದಲ್ಲಿ ಇಂದು ಶ್ರೀ ಮಡಿವಾಳ ಮಾಚಿದೇವರ ಶ್ರಾವಣ ಮಾಸದ ಸ್ಮರಣೋತ್ಸವ

ಜಿಲ್ಲಾ ಶ್ರೀ ಮಡಿವಾಳ ಮಾಚಿದೇವ ಸಂಘ, ಮಹಿಳಾ ಸಂಘ ಹಾಗೂ ಮಡಿಕಟ್ಟೆ ಸಮಿತಿ ವತಿಯಿಂದ ಶ್ರೀ ಮಡಿವಾಳ ಮಾಚಿದೇವರ ಶ್ರಾವಣ ಮಾಸದ ಸ್ಮರಣೋತ್ಸವ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 7 ರಿಂದ ಶ್ರೀ ಮಾಚಿದೇವ ಸಮು ದಾಯ ಭವನದಲ್ಲಿ ಆಯೋಜಿಸಲಾಗಿದೆ.

 ಬೆಳಿಗ್ಗೆ 7:05ರಿಂದ ರುದ್ರಾಭಿಷೇಕ ಹಾಗೂ ವಿಶೇಷ ಅಲಂಕಾರದೊಂದಿಗೆ ಪೂಜೆ ನೆರವೇರಿಸಲಾಗುತ್ತದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುತ್ತದೆ. ಬೆಳಿಗ್ಗೆ 11:30ಕ್ಕೆ ನೆರವೇರುವ ಸಭಾ ಕಾರ್ಯಕ್ರಮದ ಸಾನಿಧ್ಯವನ್ನು ಚಿತ್ರದುರ್ಗ ಮಾಚಿದೇವ ಮಹಾಮಠದ ಡಾ. ಬಸವ ಮಾಚೀದೇವ ಸ್ವಾಮೀಜಿ, ಮೂಢ ಬಿದರೆಯ ಶ್ರೀ ಮುಕ್ತಾನಂದ ಸ್ವಾಮೀಜಿ, ಶ್ರೀ ಜಡೇಸಿದ್ದ ಯೋಗೀಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ ಹಾಗೂ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಂ. ನಾಗೇಂದ್ರಪ್ಪ ವಹಿಸಲಿದ್ದಾರೆ.

ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಶಾಮನೂರು ಶಿವಶಂಕರಪ್ಪ, ಶಾಸಕ ಕೆ.ಎಸ್. ಬಸವಂತಪ್ಪ, ಮಾಜಿ ಶಾಸಕ ಎಸ್.ಎ. ರವೀಂದ್ರನಾಥ್, ಮೇಯರ್ ವಿನಾಯಕ ಪೈಲ್ವಾನ್ ಮತ್ತಿತರೆ ಗಣ್ಯರು ಆಗಮಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಹರಪನಹಳ್ಳಿ ಪುರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ. ಅಶೋಕ ಹರಾಳ್, ಪಾಲಿಕೆ ಸದಸ್ಯ ಪ್ರಸನ್ನಕುಮಾರ್, ಎ. ನಾಗರಾಜ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. 

error: Content is protected !!