ದಾವಣಗೆರೆ, ಸೆ. 10 – ಕುರುಬ ಸಮಾಜದ ಹಿರಿಯ ಮುಖಂಡ ಬಳ್ಳಾರಿ ಷಣ್ಮುಖಪ್ಪ ಅವರ ನಿಧನಕ್ಕೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಶಾಮನೂರು ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ಕೆ. ದಿನೇಶ್ ಶೆಟ್ಟಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಬೀರಲಿಂಗೇಶ್ವರ ದೇವಸ್ಥಾನ ಸಮಿತಿ, ಶಿಬಾರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಸಮಿತಿ, ಬೀರೇಶ್ವರ ವಿದ್ಯಾವರ್ಧಕ ಸಂಘ, ಕನಕ ಸಹಕಾರ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಷಣ್ಮುಖಪ್ಪ ಅವರ ಸಾಮಾಜಿಕ ಸೇವೆಯನ್ನು ಎಸ್ಸೆಸ್ ಮೆಲಕು ಹಾಕಿದ್ದಾರೆ.