ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಹರಿಹರ ತಾಲ್ಲೂಕು ಸೇರ್ಪಡೆ ಸಾಧ್ಯತೆ

ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಹರಿಹರ ತಾಲ್ಲೂಕು ಸೇರ್ಪಡೆ ಸಾಧ್ಯತೆ

ಮಲೇಬೆನ್ನೂರು, ಸೆ.13- ಹರಿಹರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸುವಂತೆ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಅವರು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಸಂಬಂಧ ಪಟ್ಟ ಸಚಿವರನ್ನು ಭೇಟಿ ಮಾಡಿ, ಒತ್ತಾಯಿಸಿದ್ದಾರೆ.

ಮಳೆಯಾಶ್ರಿತ ಪ್ರದೇಶಗಳಲ್ಲಿ ಬಿತ್ತನೆ ಮಾಡಿದ ಸಾವಿರಾರು ಎಕರೆ ಮೆಕ್ಕೆಜೋಳದ ಬೆಳೆ ಮಳೆ ಇಲ್ಲದೇ ಹಾಳಾಗಿ ಹೋಗಿದ್ದು, ರೈತರಿಗೆ ಅಪಾರ ನಷ್ಟವಾಗಿರುವ ಬಗ್ಗೆ ದಾಖಲೆಗಳ ಸಮೇತ ವರದಿಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ನೀಡಿ, ಜೊತೆಗೆ ಒತ್ತಡ ಹಾಕಿ, ಹರಿಹರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯೊಳಗೆ ಬರುವಂತೆ ಮಾಡಿ ದ್ದೇನೆ ಎಂದು ನಂದಿಗಾವಿ ಶ್ರೀನಿವಾಸ್ `ಜನತಾವಾಣಿ’ಗೆ ತಿಳಿಸಿದ್ದಾರೆ.

ಅಲ್ಲದೇ, ಭದ್ರಾ ನೀರು ಅಚ್ಚುಕಟ್ಟಿನ ಕೊನೆ ಭಾಗಕ್ಕೆ ತಲುಪದ ಕಾರಣ ಹತ್ತಾರು ಹಳ್ಳಿಗಳ ಸಾವಿರಾರು ಎಕರೆ ಭತ್ತ ಬೆಳೆಯುವ ಪ್ರದೇಶ ಖಾಲಿ ಇರುವ ಬಗ್ಗೆಯೂ ಸಿಎಂ, ಡಿಸಿಎಂ ಅವರ ಗಮನ ಸೆಳೆದಿದ್ದೇನೆ ಎಂದು ಶ್ರೀನಿವಾಸ್ ಹೇಳಿದರು.

error: Content is protected !!