ಸಿರಿಗೆರೆ ತರಳಬಾಳು ಬೃಹನ್ಮಠದ ಹಿರಿಯ ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಗಳವರ 31ನೇ ವರ್ಷದ ಶ್ರದ್ಧಾಂಜಲಿ ಕಾರ್ಯಕ್ರಮವು ಇದೇ ದಿನಾಂಕ 20 ರಿಂದ 24 ರವರೆಗೆ 5 ದಿನಗಳ ಕಾಲ ಸಿರಿಗೆರೆಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ದಾಸೋಹಕ್ಕೆ ಪ್ರತಿ ವರ್ಷದಂತೆ ಈ ವರ್ಷವೂ ದಾವಣಗೆರೆ ತಾಲ್ಲೂಕಿನ ಭಕ್ತರು ಅಕ್ಕಿಯನ್ನು ಸಮರ್ಪಿಸಲಿದ್ದಾರೆ. ಈ ಸಂಬಂಧ ಇಂದು ಸಂಜೆ 5 ಗಂಟೆಗೆ ಹದಡಿ ರಸ್ತೆಯಲ್ಲಿರುವ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ದಾವಣಗೆರೆ ತಾ. ಸಾಧು – ಸದ್ಧರ್ಮ ಸಂಘದ ಅಧ್ಯಕ್ಷರಾದ ಹಾಲುವರ್ತಿ ಮಹೇಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಭಕ್ತರು ಈ ಸಭೆಯಲ್ಲಿ ಭಾಗವಿಸಿ, ಯಶಸ್ವಿಗೊಳಿಸುವಂತೆ ಕಾರ್ಯದರ್ಶಿ ಬಿ.ವಾಮದೇವಪ್ಪ ಕೋರಿದ್ದಾರೆ.