ಹರಿಹರದಲ್ಲಿ ಇಂದು ದಸರಾ ಕ್ರೀಡಾಕೂಟದ ಬಹುಮಾನ ವಿತರಣೆ

ಹರಿಹರ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಬಹುಮಾನ ವಿತರಣೆ ಸಮಾರಂಭವು ಇಂದು ಸಂಜೆ 4.30 ಗಂಟೆಗೆ ಶ್ರೀ ವಾಲ್ಮೀಕಿ ಮಹಾಸಂಸ್ಥಾನ ವಿದ್ಯಾಪೀಠ ರಾಜನಹಳ್ಳಿಯಲ್ಲಿ ನಡೆಯಲಿದೆ ಎಂದು ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಎಸ್. ಶ್ರೀಶೈಲ ತಿಳಿಸಿದ್ದಾರೆ. ಸಾನ್ನಿಧ್ಯವನ್ನು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದ ಸ್ವಾಮೀಜಿ ವಹಿಸಲಿದ್ದಾರೆ. ಬಹುಮಾನ ವಿತರಣೆ ಶಾಸಕ ಬಿ.ಪಿ. ಹರೀಶ್ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ರಾಜನಹಳ್ಳಿ ಗ್ರಾಪಂ ಅಧ್ಯಕ್ಷೆ ಶಕುಂತಲಮ್ಮ ಯಲ್ಲಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾಪಂ ಉಪಾಧ್ಯಕ್ಷ ಪರಶುರಾಮಪ್ಪ ನೆಶ್ವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಆರ್. ಜಯಲಕ್ಷ್ಮಿ ಬಾಯಿ, ತಾಪಂ ಇಓ ಎನ್. ರವಿ, ವಾಲ್ಮೀಕಿ ಗುರುಪೀಠದ ಆಡಳಿತಾಧಿಕಾರಿ ಟಿ. ಓಬಳಪ್ಪ, ಧರ್ಮದರ್ಶಿ ಕೆ.ಬಿ. ಮಂಜುನಾಥ್, ವಾಲ್ಮೀಕಿ ವಸತಿಯುತ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ. ಸಿದ್ದೇಶ್, ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ರವಿಕುಮಾರ್, ವ್ಯವಸ್ಥಾಪಕ ಭೀಮಣ್ಣ ಬೊಮ್ಮಕ್ಕನವರ್ ಮತ್ತಿತರರು ಭಾಗವಹಿಸಲಿದ್ದಾರೆ.

error: Content is protected !!