ಕಾವೇರಿ ನಿರ್ವಹಣಾ ಪ್ರಾಧಿಕಾರದ ವಿರುದ್ಧ ಇಂದು ಕರವೇ ಪ್ರತಿಭಟನೆ

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಆಶ್ರಯದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ  ಮಹಾನಗರ ಪಾಲಿಕೆ ಆವರಣದಿಂದ ಉಪವಿಭಾಗ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿ ನಂತರ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು.

ನಾಳೆ ಶನಿವಾರ ಮಧ್ಯಾಹ್ನ 12 ಗಂಟೆಗೆ ಉಪವಿಭಾಗ ಕಚೇರಿ ಎದುರು ರಸ್ತೆ ತಡೆ ನಡೆಸಿ,  ಜೈಲು ಭರೋ ಕಾರ್ಯಕ್ರಮ  ನಡೆಸಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ತಿಳಿಸಿದ್ದಾರೆ

error: Content is protected !!