ಸರ್ ಎಂ.ವಿಶ್ವೇಶ್ವರಯ್ಯ ಕಾಲೇಜು ಸಂಸ್ಥಾಪನಾ ದಿನ ಹಾಗೂ ಅಭಿಯಂತರ (ಇಂಜಿನಿಯರ್ ಡೇ) ದಿನಾಚರಣೆಯು ಸೆ. 15ರ ಇಂದು ಮಧ್ಯಾಹ್ನ 12.30 ಕ್ಕೆ ಸರ್‌ಎಂವಿ. ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ವಾಣಿಜ್ಯ ತೆರಿಗೆ ಇಲಾಖೆಯ ಪರಮೇಶ್ವರಗೌಡ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಆಗಮಿಸ ಲಿದ್ದು, ಮುಖ್ಯ ಅತಿಥಿಗಳಾಗಿ ಜಯದೇವ ಹೃದ್ರೋಗ ಆಸ್ಪತ್ರೆಯ ಹೃದಯ ರೋಗ ತಜ್ಞ ಡಾ. ಸಿ.ಎಂ. ನಾಗೇಶ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್.ಎಂ.ವಿ. ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಸ್.ಜೆ. ಶ್ರೀಧರ ವಹಿಸಲಿದ್ದಾರೆ.