ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಆಧಾರ ಸ್ಥಂಭ `ಭಾರತ ರತ್ನ’ ಡಾ. ಸರ್.ಎಂ. ವಿಶ್ವೇಶ್ವರಯ್ಯನವರ ದಿನಾಚರಣೆಯನ್ನು ಇಂದು ಬೆಳಿಗ್ಗೆ 10-30ಕ್ಕೆ ಬಿ.ಇ.ಓ. ಶಿಕ್ಷಣ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಬಿಇಎ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎ.ಜೆ.ನೀತ ಅವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷರಾದ ಬಿ. ವಾಮದೇವಪ್ಪ ವಹಿಸುವರು.
ಎಲ್.ಎಸ್. ಪ್ರಭುದೇವ್ ಅವರು ಉಪನ್ಯಾಸ ನೀಡುವರು. ಲೋಕೋಪಯೋಗಿ ಇಲಾಖೆಯ ವಿಶ್ರಾಂತ ಸಹಾಯಕ ಕಾರ್ಯಪಾಲಕ ಅಭಿಯಂತರ ವೈ.ಎನ್. ರಂಗನಾಥ್ ಇವರನ್ನು ಸನ್ಮಾನಿಸಲಾಗುವುದು.