ತಾಲ್ಲೂಕಿಗೊಂದು ಮಾದರಿ ಗ್ರಾಮ ಪಂಚಾಯ್ತಿ

ತಾಲ್ಲೂಕಿಗೊಂದು ಮಾದರಿ ಗ್ರಾಮ ಪಂಚಾಯ್ತಿ

ದಾವಣಗೆರೆ, ಸೆ.15- ತಾಲ್ಲೂಕಿ ಗೊಂದು ಮಾದರಿ ಗ್ರಾಮ ಪಂಚಾ ಯಿತಿ ಮಾಡುವ ಗುರಿಯಿದ್ದು,  ಈ ವರ್ಷವೇ ಚಾಲನೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಹೇಳಿದ್ದಾರೆ.

ಮಹಾನಗರ ಪಾಲಿಕೆಯಲ್ಲಿ `ಗ್ರಾಮ ಚೈತನ್ಯ’ ಜನಸಂಪರ್ಕ ಕಚೇರಿ ಉದ್ಘಾಟಿಸಿ, ನಂತರ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಮಾದರಿ ಗ್ರಾಮ ಪಂಚಾಯ್ತಿಯಲ್ಲಿ ಮಾಹಿತಿ ಕೇಂದ್ರ, ಗ್ರಂಥಾಲಯ, ಮಹಿಳಾ ಸದಸ್ಯೆಯರಿಗೆ ಪ್ರತ್ಯೇಕ ಕೊಠಡಿ, ಸುಧಾರಿತ ಅಂತರ್ಜಾಲ ವ್ಯವಸ್ಥೆ, 300 ಜನ ಕುಳಿತುಕೊಂಡು ಗ್ರಾಮ ಸಭೆ ನಡೆಸಲು ಅನುಕೂಲವಾಗುವಂತೆ ಸಭಾಂಗಣ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯಾಗಾರವನ್ನು ಶೀಘ್ರವೇ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಅದೇ ರೀತಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಪಂ ಅಧ್ಯಕ್ಷರ ಸಮ್ಮುಖದಲ್ಲಿ ಪ್ರಗತಿ ಪರಿಶೀಲನೆ ನಡೆಸಿ, ಗ್ರಾಪಂಗಳ ಸಮಸ್ಯೆ, ಬೇಡಿಕೆಗಳ ಬಗ್ಗೆ ಚರ್ಚಿಸಲು ಕ್ರಮ ವಹಿಸಲಾಗುವುದು. ಗ್ರಾಪಂ ಸದಸ್ಯರಿಗೆ, ರೈತರಿಗೆ ವಿವಿಧ ಇಲಾಖೆಗಳ ಯೋಜನೆಯಡಿ ಅಧ್ಯಯನ ಪ್ರವಾಸ ಕೈಗೊಳ್ಳಲು ಕ್ರಮ ವಹಿಸಲಾ ಗುವುದು. ಇವೆಲ್ಲದರ ಜತೆಗೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನುಕೂಲವಾಗುವ ಉದ್ಯೋಗ ಮಾರ್ಗದರ್ಶಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುವುದು ಎಂದರು.

ಮಾಜಿ ಶಾಸಕರಾದ ಎಸ್.ಎ. ರವೀಂದ್ರನಾಥ್, ಪ್ರೊ. ಲಿಂಗಣ್ಣ, ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಡಾ. ಎ.ಎಚ್‌.ಶಿವಯೋಗಿ ಸ್ವಾಮಿ, ಮಹಾನಗರ ಪಾಲಿಕೆ ಉಪ ಮೇಯರ್ ಯಶೋಧ ಯಗ್ಗಪ್ಪ, ಪಾಲಿಕೆ ವಿಪಕ್ಷ ನಾಯಕ ಕೆ. ಪ್ರಸನ್ನಕುಮಾರ್,   ಮಾಜಿ ಮೇಯರ್ ಎಸ್.ಟಿ. ವೀರೇಶ್, ಸದಸ್ಯರುಗಳಾದ ಕೆ.ಎಂ. ವೀರೇಶ್, ಎಲ್.ಡಿ. ಗೋಣೆಪ್ಪ, ರೇಣುಕಾ ಶ್ರೀನಿವಾಸ್,  ಗಾಯತ್ರಿಬಾಯಿ, ಗೌರಮ್ಮ,  ಶಿವಾನಂದ, ದೂಡಾ ಮಾಜಿ ಅಧ್ಯಕ್ಷ ಕೆ.ಎಂ. ಸುರೇಶ್ ಹಾಗು ಇತರರು ಈ  ಸಂದರ್ಭದಲ್ಲಿದ್ದರು.

error: Content is protected !!