ದಾವಣಗೆರೆ, ಸೆ.15- ನಗರದಲ್ಲಿ ಗುರುವಾರ ಬಾಲಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರು ದುಡಿಯುತ್ತಿರುವ ಕ್ಷೇತ್ರಗಳಿಗೆ ಅನಿರೀಕ್ಷಿತ ದಾಳಿ ಮಾಡಿ 3 ಜನ ಬಾಲಕಾರ್ಮಿಕರನ್ನು ಪತ್ತೆ ಮಾಡಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣವರ ಹಾಗೂ ಸಹಾಯಕ ಕಾರ್ಮಿಕ ಆಯುಕ್ತರಾದ ವೀಣಾ ಎಸ್.ಆರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ. ಇಬ್ರಾಹಿಂ ಸಾಬ್, ಕಾರ್ಮಿಕ ನಿರೀಕ್ಷಕರಾದ ರಾಜಪ್ಪ, ನಾಗೇಶ್, ರಾಜಶೇಖರ್, ಯೋಜನಾ ನಿರ್ದೇಶಕರಾದ ಪ್ರಸನ್ನ, ಮಕ್ಕಳ ರಕ್ಷಣಾ ಘಟಕದ ಕೆ.ಆರ್.ಹಾಲೇಶ್, ಹಾಗೂ ಪೊಲೀಸ್ ಸಿಬ್ಬಂದಿಗಳು ಇವರ ನೇತೃತ್ವದಲ್ಲಿ ಅನಿರೀಕ್ಷಿತ ದಾಳಿಯಲ್ಲಿ ಪತ್ತೆಯಾದ 3 ಮಕ್ಕಳನ್ನು ಪುನರ್ ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ನೀಡಲಾಗಿದ್ದು, ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ.ಕರೆಣ್ಣವರ ತಿಳಿಸಿದ್ದಾರೆ.