ದಾವಣಗೆರೆ, ಸೆ.17- ನಗರದ ಶಿವಕುಮಾರಸ್ವಾಮಿ ಬಡಾವಣೆ 2ನೇ ಮುಖ್ಯ ರಸ್ತೆಯಲ್ಲಿರುವ ಸಂಜೀವಿನಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯಿಂದ ನಾಳೆ ದಿನಾಂಕ 18 ರ ಸೋಮವಾರ 17ನೇ ವರ್ಷದ ಗಣೇಶೋತ್ಸವ ವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಜಿ.ಪಿ. ಮುಪ್ಪಣ್ಣ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದ ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಪಾಲಿಕೆ ಸದಸ್ಯರಾದ ಕೆ.ಎಂ. ವೀರೇಶ್, ಎಸ್. ಮಂಜುನಾಥ್, ಹನುಮಂತಪ್ಪ ಆಗಮಿಸುವರು.
January 15, 2025