ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಯಿಂದ ಇಂದು ಮಧ್ಯಾಹ್ನ 12 ಗಂಟೆಗೆ ಮಹಾನಗರ ಪಾಲಿಕೆ ಆವರಣದಿಂದ ಮೆರವಣಿಗೆ ಹೊರಟು, ಸಂಸದ ಜಿ. ಎಂ. ಸಿದ್ದೇಶ್ವರ ಅವರ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರವೇ ಜಿಲ್ಲಾ ಅಧ್ಯಕ್ಷ ಎಂ.ಎಸ್. ರಾಮೇಗೌಡ ತಿಳಿಸಿದ್ದಾರೆ. ಕಾವೇರಿ ವಿಚಾರದಲ್ಲಿ ಸಂಸದರು ಯಾವುದೇ ಧ್ವನಿ ಎತ್ತದಿರುವುದರ ವಿರುದ್ಧ ಮತ್ತು ರಾಜ್ಯ ಸರ್ಕಾರ ಕೋರ್ಟಿಗೆ ಸರಿಯಾಗಿ ಮಾಹಿತಿ ನೀಡದ ಕಾರಣ, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
December 23, 2024