ರಂಭಾಪುರಿ ಪೀಠದಲ್ಲಿ ನಾಳೆ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ

ಬಾಳೆಹೊನ್ನೂರು, ಸೆ. 27- ಬಾಳೆಹೊನ್ನೂರಿನ ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಾಡಿದ್ದು ದಿನಾಂಕ 29 ರ ಶುಕ್ರವಾರ ಬೆಳಿಗ್ಗೆ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ.

ಅಖಿಲ ಕರ್ನಾಟಕ ವೀರಶೈವ ಅರ್ಚಕ ಪುರೋಹಿತರ ನಿಸ್ವಾರ್ಥ ಸೇವಾ ಸಂಘದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮ ದಲ್ಲಿ ಮಠಾಧೀಶರು ಭಾಗವಹಿಸಲಿದ್ದಾರೆ.

error: Content is protected !!