ಮಲೇಬೆನ್ನೂರು, ಸೆ.28- ಈದ್ ಮಿಲಾದ್ ಹಬ್ಬವನ್ನು ಗುರುವಾರ ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಶ್ರದ್ಧಾ-ಭಕ್ತಿಯಿಂದ ಆಚರಿಸಿದರು.
ಗುರುವಾರ ಪಟ್ಟಣದಲ್ಲಿ ವಾರದ ಸಂತೆ ಇದ್ದುದರಿಂದ ಈದ್ ಮಿಲಾದ್ ಮೆರವಣಿಗೆಯನ್ನು ಶುಕ್ರವಾರ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಮಧ್ಯಾಹ್ನ 3 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಜುಮ್ಮ ಮಸೀದಿಯ ಆಡಳಿತಾಧಿಕಾರಿ ಡಾ. ನಿಸ್ಸಾರ್ ತಿಳಿಸಿದ್ದಾರೆ.
ಇಲ್ಲಿನ ಸೈಯದ್ ಹಬೀಬುಲ್ಲಾ ಷಾ ಖಾದ್ರಿಯವರ ದರ್ಗಾದಿಂದ ಪ್ರಾರಂಭವಾಗುವ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂದಿಗುಡಿಯ ಶಾದಿ ಮಹಲ್ ಬಳಿ ಅಂತ್ಯಗೊಳ್ಳಲಿದೆ.