ಶಿವಮೊಗ್ಗದಲ್ಲಿ 144ನೇ ಸೆಕ್ಷನ್
ಶಿವಮೊಗ್ಗ, ಅ. 1 – ಶಿವಮೊಗ್ಗದಲ್ಲಿ ಈದ್ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿ ಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆ ಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144ನೇ ಸೆಕ್ಷನ್ ಜಾರಿ ಮಾಡ ಲಾಗಿದೆ. ಸ್ಥಳಕ್ಕೆ ಕ್ಷಿಪ್ರ ಕಾರ್ಯಾ ಚರಣೆ ತಂಡ ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈದ್ ಮಿಲಾದ್ ಹಿನ್ನೆಲೆಯಲ್ಲಿ ರಾಗಿಗುಡ್ಡದಲ್ಲಿ ಹಾಕಿದ್ದ ಕಟೌಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಕಟೌಟ್‌ನ ಭಾಗಕ್ಕೆ ಬಿಳಿ ಬಣ್ಣ ಬಳಿಯ ಲಾಗಿದೆ ಎಂದು ಆರೋಪಿಸಿ ಗುಂಪೊಂದು ಭಾನುವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿತ್ತು. ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಸ್ಥಳಕ್ಕೆ ತೆರಳಿ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಪರಿಸ್ಥಿತಿ ತಿಳಿಗೊಳಿಸಿ, ಅಲ್ಲಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಿದ್ದರು.