ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಇಂದು ಮಧ್ಯಾಹ್ನ 12.30 ಕ್ಕೆ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಸಂಘದ ವಿದ್ಯಾರ್ಥಿ ನಿಲಯದ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಯ ಹಿಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಶಾಮನೂರು ಶಿವಶಂಕರಪ್ಪ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಅಂಬೇಡ್ಕರ್ ಪ್ರತಿಮೆಗೆ, ಎಸ್ಪಿ ಉಮಾ ಪ್ರಶಾಂತ್ ಬಾಬು ಜಗಜೀವನರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಆಯುಕ್ತ ರಾದ ಶ್ರೀಮತಿ ರೇಣುಕ ಮತ್ತಿತರರು ಭಾಗವ ಹಿಸಲಿದ್ದಾರೆಂದು ಸಂಘದ ಕಾರ್ಯದರ್ಶಿ ಬಿ.ಹೆಚ್. ವೀರಭದ್ರಪ್ಪ ತಿಳಿಸಿದ್ದಾರೆ.