ಕಾಂಗ್ರೆಸ್‍ನಿಂದ ಇಂದು ಮಹಾತ್ಮ ಗಾಂಧಿ, ಶಾಸ್ತ್ರೀಜಿ ಜನ್ಮ ದಿನಾಚರಣೆ

ಕಾಂಗ್ರೆಸ್‍ನಿಂದ ಇಂದು ಮಹಾತ್ಮ ಗಾಂಧಿ, ಶಾಸ್ತ್ರೀಜಿ ಜನ್ಮ ದಿನಾಚರಣೆ

ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ (ಶಾಮನೂರು ಶಿವಶಂಕರಪ್ಪ ಭವನ) ರಾಷ್ಟ್ರಪಿತ ಮಹಾತ್ಮ ಗಾಂಧೀಜೀ ಮತ್ತು ಮಾಜಿ ಪ್ರಧಾನಮಂತ್ರಿ ದಿ. ಲಾಲ್ ಬಹದ್ದೂರ್ ಶಾಸ್ತ್ರೀಜೀಯವರ ಜನ್ಮ ದಿನವನ್ನು ಇಂದು ಆಚರಿಸಲಾಗುವುದು.

 ಮಧ್ಯಾಹ್ನ 1 ರಿಂದ 2 ರವರೆಗೆ ಸ್ವಚ್ಚತಾ ಕಾರ್ಯ ಹಾಗೂ 2 ಗಂಟೆಗೆ ಜನ್ಮ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.

ಶಾಸಕ ಶಾಮನೂರು ಶಿವಶಂಕರಪ್ಪ, ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಹೆಚ್.ವೀರಭದ್ರಪ್ಪ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಎಲ್.ಎಂ.ಹನುಮಂತಪ್ಪ, ಜಿಲ್ಲಾ ಕಾರ್ಯದರ್ಶಿ ಬಿ.ಎಂ.ಈಶ್ವರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

error: Content is protected !!