ನಗರದಲ್ಲಿ ಇಂದು ಮಹಿಳೆಯರಿಗಾಗಿ ಕಾನೂನು ಜಾಗೃತಿ ವಿಚಾರ ಸಂಕಿರಣ

ದಾವಣಗೆರೆ, ಅ.4- ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಾಮಾಜಿಕ ನ್ಯಾಯಕ್ಕಾಗಿ) ವತಿಯಿಂದ ಮಹಿಳೆಯರಿಗಾಗಿ ಕಾನೂನು ಜಾಗೃತಿ, ವಿಚಾರ ಸಂಕಿರಣ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ನಾಳೆ ದಿನಾಂಕ 5ರ ಗುರುವಾರ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಎಸ್.ವಿ. ಜಿಗಳಿ ಹಾಲೇಶ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ  ಭಾಗದ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಲ್ಲಿ ಕಾನೂನಿನ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ, ಸಂಘಟನೆಯ ರಾಜ್ಯಾಧ್ಯಕ್ಷ ಡಾ.ಸಿ.ಎಸ್. ರಘು, ಶ್ರೀ ಷಡಕ್ಷರಿಮುನಿ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣನವರ್, ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್, ಎಸ್ಪಿ ಉಮಾ ಪ್ರಶಾಂತ್, ಜಿಪಂ ಸಿಇಒ ಸುರೇಶ್  ಬಿ. ಇಟ್ನಾಳ್, ದಾವಿವಿ ಕುಲಪತಿ ಡಾ.ಬಿ.ಡಿ. ಕುಂಬಾರ, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ ಹಾಗುಇತರರು ಆಗಮಿಸಲಿದ್ದಾರೆ ಎಂದರು.

ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಹೆಚ್.ಸಿ. ಸಿದ್ದೇಶ್ ಬಾತಿ, ಪರಮೇಶ್ ಪುರದಾಳ್, ಹೆಚ್.ಮಂಜುನಾಥ್ ಹಲೇ ಕುಂದುವಾಡ, ಹೆಚ್.ಮಂಜುನಾಥ್ ಇಂದ್ರನಗರ, ಹೆಚ್.ಹನುಮಂತ ಶಾಮನೂರು, ನಾಗರಾಜ್ ಪುಟಗನಾಳ್, ಬಿ. ನಿಂಗಪ್ಪ ಹಳೇ ಚಿಕ್ಕನಹಳ್ಳಿ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.

error: Content is protected !!