ದಾವಣಗೆರೆ, ಅ.4- ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಮಹಾಸಭಾದ 24ನೇ ಮಹಾ ಅಧಿವೇಶನವು ಬರುವ ಡಿಸೆಂಬರ್ ತಿಂಗಳಲ್ಲಿ ನಗರದಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯನ್ನು ನಾಡಿದ್ದು ದಿನಾಂಕ 6ರ ಶುಕ್ರವಾರ ಕರೆಯಲಾಗಿದೆ.
ಅಂದು ಮಧ್ಯಾಹ್ನ 12.30 ಗಂಟೆಗೆ ಸ್ಥಳೀಯ ಎಂ.ಬಿ.ಎ.ಕಾಲೇಜು ಆವರಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರ ಅಧ್ಯಕ್ಷತೆಯಲ್ಲಿ ಈ ಸಭೆ ಏರ್ಪಾಡಾಗಿದೆ.
ಈ ಸಭೆಯಲ್ಲಿ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ರಾಷ್ಟ್ರೀಯ ಉಪಾಧ್ಯಕ್ಷರುಗಳಾದ ಎನ್. ತಿಪ್ಪಣ್ಣ, ಅಥಣಿ ವೀರಣ್ಣ, ಎಸ್.ಎಸ್.ಗಣೇಶ್, ಅಣಬೇರು ರಾಜಣ್ಣ, ವಿನಯ್ ಕುಲಕರ್ಣಿ, ಪ್ರಭಾಕರ್ ಕೋರೆ, ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ ಮತ್ತಿತರರು ಉಪಸ್ಥಿತರಿರುತ್ತಾರೆ.
ವೀರಶೈವ ಲಿಂಗಾಯತ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಭಾಗವಹಿಸಬೇಕಾಗಿ ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ಕೋರಿದ್ದಾರೆ.