ಹರಿಹರ : ಗಣೇಶ ವಿಸರ್ಜನೆ ವೇಳೆ ಮಾತಿನ ಚಕಮಕಿ

ಹರಿಹರ, ಅ.4- ನಗರದ ಬೆಂಕಿನಗರ ಬಡಾವಣೆಯ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಎರಡು ಕೋಮಿನ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದಿದ್ದು, ನಂತರ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ. ಸ್ಥಳಕ್ಕೆ ಡಿವೈಎಸ್ಪಿ ಜಿ.ಎಸ್. ಬಸವರಾಜ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಆಗಮಿಸಿ, ಸ್ಥಳ ಪರಿಶೀಲನೆ ನಡೆಸಿದರು. 

error: Content is protected !!