ಕೇಂದ್ರ ಸರ್ಕಾರದ ಬರ ಪರಿಸ್ಥಿತಿ ಅಧ್ಯಯನ ತಂಡ ಮಳೆ, ಬೆಳೆ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಲು ಇಂದು ಜಗಳೂರಿಗೆ ಆಗಮಿಸಲಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಜಗಳೂರು ಈಗಾಗಲೇ ಬರ ಪೀಡಿತ ತಾಲ್ಲೂಕು ಎಂದು ಘೋಷಣೆ ಯಾಗಿದ್ದು, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ 3 ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಸಂಚಾರ ನಡೆಸಿವೆ.
ಕೇಂದ್ರ ಜಲ ಆಯೋಗದ ನಿರ್ದೇಶಕ ವಿ. ಅಶೋಕ್ ಕುಮಾರ್ ನೇತೃತ್ವದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧೀನ ಕಾರ್ಯ ದರ್ಶಿ ಸಂಗೀತ ಕುಮಾರ್, ಎಂ ಎನ್ ಸಿ ಎಫ್ ಸಿ ಉಪನಿರ್ದೇಶಕರು ಹಾಗೂ ರಾಜ್ಯ ಸರ್ಕಾರದ ಪ್ರಕೃತಿ ವಿಕೋಪ ನಿರ್ವಹಣಾ ಸಮಿತಿ ಮುಖ್ಯಸ್ಥ
ಹಾಗೂ ರಾಜ್ಯ ಸರ್ಕಾರದ ಪ್ರಕೃತಿ ವಿಕೋಪ ನಿರ್ವಹಣಾ ಸಮಿತಿ ಮುಖ್ಯಸ್ಥ ಜಿ.ಎಸ್. ಶ್ರೀನಿವಾಸ ರೆಡ್ಡಿ ಅವರನ್ನು ಒಳ ಗೊಂಡ ಅಧಿಕಾರಿಗಳ ತಂಡ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಜಗಳೂರು ತಾಲ್ಲೂಕಿನ ತೀವ್ರ ಬರಪೀಡಿತ ಗ್ರಾಮಗಳಾದ ದೋಣೆಹಳ್ಳಿ, ಭರಮಸಮುದ್ರ, ತಾಯಟೋಣಿ, ಹಿರೇಮಲ್ಲನಹೊಳೆ, ಸಿದ್ದಿಹಳ್ಳಿ ಮುಷ್ಟೂರು ಮುಂತಾದ ಗ್ರಾಮಗಳ ಕೃಷಿ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ನಿರೀಕ್ಷೆ ಇದೆ.
ಕೇಂದ್ರ ಬರ ಅಧ್ಯಯನ ತಂಡದ ಜೊತೆಗೆ ಶಾಸಕ ಬಿ. ದೇವೇಂದ್ರಪ್ಪ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳು ಸಾಥ್ ನೀಡಲಿದ್ದಾರೆ.