ನಗರದಲ್ಲಿ ಇಂದು ವಾಲ್ಮೀಕಿ ಸಮಾಜದಿಂದ ಪುರಸ್ಕಾರ

ದಾವಣಗೆರೆ, ಅ.7- ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ  ಜಿಲ್ಲಾ ಘಟಕದ ವತಿಯಿಂದ ನಾಳೆ ದಿನಾಂಕ 8 ರಂದು ಬೆಳಿಗ್ಗೆ 10.30 ಕ್ಕೆ ವಾಲ್ಮೀಕಿ ನಾಯಕ ಸಮುದಾಯದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನಗರದ ರಿಂಗ್ ರಸ್ತೆ ಸಮೀಪದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಸಿ. ಶ್ರೀನಿವಾಸಮೂರ್ತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಬಿ. ದೇವೇಂದ್ರಪ್ಪ ಚಿಕ್ಕಮ್ಮನಹಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಇನ್‌ಸೈಟ್ಸ್ ಐಎಎಸ್ ಸಂಸ್ಥೆಯ ಜಿ.ಬಿ. ವಿನಯ್ ಕುಮಾರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ದೇವೇಂದ್ರಪ್ಪ, ಮಾಜಿ ಶಾಸಕರಾದ ಹೆಚ್.ಪಿ. ರಾಜೇಶ್, ಎಸ್.ವಿ. ರಾಮಚಂದ್ರ, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್. ಪದ್ಮನಾಭ್, ರಾಜ್ಯ ಪರಿಶಿಷ್ಟ ಪಂಗಡದ ನೌಕರರ ಸಂಘದ ಅಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ, ಕರ್ನಾಟಕ ಕುಸ್ತಿ ಫೆಡರೇಶನ್ ರಾಜ್ಯಾಧ್ಯಕ್ಷ ಬಿ. ವೀರಣ್ಣ, ಆರ್.ಎಸ್. ಶೇಖರಪ್ಪ, ಬಂಡಾಯ ಸಾಹಿತಿ ಪ್ರೊ. ಎ.ಬಿ. ರಾಮಚಂದ್ರಪ್ಪ, ಹೂವಿನಮಡು ಚಂದ್ರಪ್ಪ, ಹೊದಿಗೆರೆ ರಮೇಶ್, ಹದಡಿ ಹಾಲಪ್ಪ ಸೇರಿದಂತೆ ಸಮಾಜದ ಗಣ್ಯರು ಭಾಗವಹಿಸಲಿದ್ದಾರೆ.

ಅಪರ ಜಿಲ್ಲಾಧಿಕಾರಿ ಲೋಕೇಶ್, ಮೈಸೂರು ವಿವಿ ವಿಶ್ರಾಂತ ಕುಲಸಚಿವ ಪ್ರೊ. ರಾಜಣ್ಣ, ಪಾಮೇನಹಳ್ಳಿ ನಾಗರಾಜ್, ಸವಿತಾ ಹುಲ್ಮನಿ, ಮೀನಾ ಜಗದೀಶ, ಸಿ. ತಿಪ್ಪೇಸ್ವಾಮಿ, ಇ. ಶ್ರೀನಿವಾಸ್ ಮೂರ್ತಿ, ಕರಿಸಿದ್ಧಪ್ಪ, ನಾಗಪ್ಪ ಬಂಕಾಳಿ ಸೇರಿದಂತೆ ಸಮಾಜದ ಮುಖಂಡರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಅಜ್ಜಯ್ಯ, ವಿಜಯ್ ಕುಮಾರ್, ಗೋವರ್ಧನ್, ಕೆ.ಸಿ. ನಿರಂಜನ್ ಉಪಸ್ಥಿತರಿದ್ದರು.

error: Content is protected !!