ಡಿ. ದೇವರಾಜ ಅರಸು ಬಡಾವಣೆ ಸಿ ಮತ್ತು ಬಿ ಬ್ಲಾಕ್ನ ಡಬಲ್ ರೋಡ್ನಲ್ಲಿರುವ ಶ್ರೀ ಬನ್ನಿ ಮಹಾಂಕಾಳಿ ದೇವಿ ದೇವಸ್ಥಾನದ 3ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಇಂದು ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಇದಂು ಬೆಳಿಗ್ಗೆ 6 ಗಂಟೆಗೆ ಶ್ರೀ ದೇವಿಗೆ ಅಭಿಷೇಕ ಮತ್ತು ಮಹಾಪೂಜೆ ನೆರವೇರಲಿದ್ದು, ಮಧ್ಯಾಹ್ನ 12 ಗಂಟೆಗೆ ಸದ್ಭಕ್ತರಿಗೆ ಮಹಾ ಪ್ರಸಾದ ಏರ್ಪಾಡಿಸಲಾಗಿದೆ. ಶ್ರೀ ಬನ್ನಿ ಮಹಾಂಕಾಳಿ ದೇವಿ ಸೇವಾ ಸಮಿತಿ ಈ ಕಾರ್ಯಕ್ರಮ ಆಯೋಜಿಸಿದೆ.