ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆ

ದಾವಣಗೆರೆ, ಅ.11- ದಸರಾ ಸಿ.ಎಂ. ಕಪ್ ಕ್ರೀಡಾ ಕೂಟ–2023 ರ ಅಂಗವಾಗಿ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯನ್ನು ಇದೇ ದಿನಾಂಕ 14 ರ ಶನಿವಾರ ಮೈಸೂರಿನಲ್ಲಿ ಏರ್ಪಡಿಸಲಾಗಿದೆ.

ದಾವಣಗೆರೆ ಜಿಲ್ಲೆಯಿಂದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಹೆಸರನ್ನು ನಾಳೆ ದಿನಾಂಕ 12ರೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಶ್ರೀಮತಿ ಅಲ್ಕಾ ಪಡತಾರೆ ದೂ.9448234883, ಅನಿತಾ ನಿಂಬರಗಿ ದೂ. 9449959064ಗೆ ಸಂಪರ್ಕಿಸ ಬಹುದೆಂದು ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ ಬಾಯಿ ತಿಳಿಸಿದ್ದಾರೆ.

error: Content is protected !!