16 ರಂದು ಬೃಹತ್ ಉದ್ಯೋಗ ಮೇಳ

ದಾವಣಗೆರೆ, ಅ.11- ಇದೇ ದಿನಾಂಕ  16 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ನಗರದ ಮುನ್ಸಿಪಲ್ ಗ್ರೌಂಡ್ ಹತ್ತಿರ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 

ಉದ್ಯೋಗ ಮೇಳಕ್ಕೆ ವಿವಿಧ ಜಿಲ್ಲೆ ಹಾಗೂ ರಾಜ್ಯಮಟ್ಟದಿಂದ 100-150 ಉದ್ಯೋಗದಾತರು ಭಾಗವಹಿಸಲಿದ್ದು, ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

error: Content is protected !!