ದಾವಣಗೆರೆ, ಅ.18- ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ಸಾಲಿನ (ಜುಲೈ ಆವೃತ್ತಿ) ಪ್ರಥಮ ವರ್ಷದ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎ, ಬಿ.ಕಾಂ., ಬಿ.ಎಸ್.ಸಿ., ಬಿ.ಲಿಬ್., ಐ.ಎಸ್.ಸಿ., ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲೂ., ಎಂ.ಎ., ಎಂ.ಕಾಂ., ಎಂ.ಎ-ಎಂ.ಸಿ.ಜೆ., ಎಂ.ಲಿಬ್.ಐ.ಎಸ್.ಸಿ., ಎಂ.ಬಿ.ಎ., ಎಂಎಸ್.ಸಿ., ಎಂ.ಸಿ.ಎ., ಎಂ.ಎಸ್.ಡಬ್ಲೂ. ಪದವಿಗಳು ಹಾಗೂ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಬಿಪಿಎಲ್ ಕಾರ್ಡ್ ಹೊಂದಿದ ಮಹಿಳಾ ವಿದ್ಯಾರ್ಥಿನಿಯರಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕರು, ಆಟೋ ಮತ್ತು ಕ್ಯಾಬ್ ಚಾಲಕರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಮತ್ತು ಕೋವಿಡ್-19 ಸಮಯದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳು, ದೃಷ್ಟಿಹೀನ ಮಕ್ಕಳು ಮತ್ತು ತೃತೀಯ ಲಿಂಗಿಗಳಿಗೆ ಪೂರ್ಣ ಶುಲ್ಕ ರಿಯಾಯಿತಿ ಇರುತ್ತದೆ. ಅಲ್ಲದೇ ಎರಡು ಕೋರ್ಸುಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿದೆ.
ಆಸಕ್ತ ಅಭ್ಯರ್ಥಿಗಳು ನಾಡಿದ್ದು ದಿನಾಂಕ 20 ರೊಳಗಾಗಿ ಕರಾಮುವಿ ಯ ಅಧಿಕೃತ ವೆಬ್‍ಸೈಟ್: www.ksoumysuru.ac.in ನಲ್ಲಿ ಆನ್‍ಲೈನ್ ಅಡ್ಮಿಷನ್ ಪೋರ್ಟಲ್‍ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಭರ್ತಿ ಮಾಡಿ, ದಾವಣಗೆರೆ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ, ಆನ್‍ಲೈನ್ ಮೂಲಕ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿ ದ್ಯಾನಿಲಯದ ಅಧಿಕೃತ ಜಾಲತಾಣ www.ksoumysuru.ac.in ಅಥವಾ ಸ. ಸಂ. 8690544544, 8800335638, ಮೊ. ಸಂ. 9916009318, 8095939359 ಹಾಗೂ ಜೆ.ಹೆಚ್ ಪಟೇಲ್ ಬಡಾವಣೆಯಲ್ಲಿರುವ ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರ ಕಚೇರಿ ಸಂಪರ್ಕಿಸಲು ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.