ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ

ದಾವಣಗೆರೆ, ಅ. 17 – ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಹಾಗೂ ಸೇವೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆಗಳನ್ನು ಇಲಾಖೆಯ ವೆಬ್‍ಸೈಟ್ WWW.dwdsc.kar.nic.in   ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು  ಇದೇ ದಿನಾಂಕ 25 ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08192-263936 ಸಂಪರ್ಕಿಸಬಹುದಾಗಿದೆ.

error: Content is protected !!