ನಗರದಲ್ಲಿ ನಾಳೆ ವಿಶೇಷ ತರಬೇತಿ

ದಾವಣಗೆರೆ, ಅ.17- ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಸಹಕಾರ ಇಲಾಖೆ ದಾವಣಗೆರೆ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಇವರುಗಳ ಸಂಯುಕ್ತಾಶ್ರಯದಲ್ಲಿ ನಾಡಿದ್ದು ದಿನಾಂಕ 19ರ ಬೆಳಿಗ್ಗೆ 10.30ಕ್ಕೆ ದಾವಣಗೆರೆ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳು, ನೌಕರರ ಪತ್ತಿನ ಸಹಕಾರ ಸಂಘಗಳು ಹಾಗೂ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‍ಗಳ ಅಧ್ಯಕ್ಷರು, ವ್ಯವಸ್ಥಾಪಕರು, ಕಾರ್ಯದರ್ಶಿಗಳಿಗೆ ಒಂದು ದಿನದ ವಿಶೇಷ ತರಬೇತಿ ಶಿಬಿರವನ್ನು ನಗರದ ಜನತಾ ಬಜಾರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ಅಧ್ಯಕ್ಷ ಸಿರಿಗೆರೆ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಜರಗುವ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಡಾ. ಜಿ.ಆರ್. ಷಣ್ಮುಖಪ್ಪ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾ ಗಿ ಶೋಭಾ ಬಿ. ಉಮೇಶ ಕುಮಾರ್, ಬೇತೂರು ರಾಜಣ್ಣ, ಆರ್.ಜಿ. ಶ್ರೀನಿವಾಸಮೂರ್ತಿ, ಹೆಚ್. ಅನ್ನಪೂರ್ಣ, ಕೆ. ಮಹೇಶ್ವರಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

error: Content is protected !!