ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದಾವಣಗೆರೆಯ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶುಸಂಗೋಪನಾ ಚಟು ವಟಿಕೆಗಳ ಕುರಿತು ತರಬೇತಿ ಶಿಬಿರ ನಡೆಯಲಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಪಶು ವೈದ್ಯಾಧಿಕಾರಿ ಗುರುಶಾಂತಪ್ಪ ಬಿ.ಜಿ ತಿಳಿಸಿದ್ದಾರೆ.
ಇಂದು ಮತ್ತು ನಾಳೆ ಆಧುನಿಕ ಹೈನುಗಾರಿಕೆ ತರಬೇತಿ ಹಾಗೂ ದಿನಾಂಕ 27, 28 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನೀಡಲಾಗುವುದು. ವಿವರಕ್ಕೆ ಸಂಪರ್ಕಿಸುವ ದೂರವಾಣಿ : 08192-233787.