30ಕ್ಕೆ ಹರಿಹರದಲ್ಲಿ ಉದ್ಯೋಗ ಮೇಳ

ಹರಿಹರ, ಅ.25- ಶ್ರೀ ಜಿ. ಮಲ್ಲಿಕಾರ್ಜುನಪ್ಪ ಮತ್ತು ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಇದೇ ದಿನಾಂಕ 30ನೇ ಸೋಮವಾರ ಹರಿಹರದ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ಉದ್ಯೋಗ ಹುಡುಕುತ್ತಿರುವ ಯುವಕ – ಯುವತಿಯರಿಗೆ ಆಯೋಜಿಸಲಾಗಿದೆ.

ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಇಂಜಿನಿಯರಿಂಗ್, ಎಂಬಿಎ ಮುಗಿಸಿದ  ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.

ಉದ್ಯೋಗ ಮೇಳದಲ್ಲಿ 30ಕ್ಕೂ ಹೆಚ್ಚಿನ ಕಂಪನಿಗಳು ಭಾಗವಹಿಸ ಲಿದ್ದು, ಮೂರು ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿದೆ ಎಂದು ಉದ್ಯೋಗಾಧಿಕಾರಿ ಟಿ.ಆರ್.ತೇಜಸ್ವಿ ಕಟ್ಟಿಮನಿ ತಿಳಿಸಿದ್ದಾರೆ.

ಮೇಳದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು https://forms.gle/BN5KqYfovodCXzAQ8 ಲಿಂಕ್ ಮೂಲಕ ತಮ್ಮ ಸ್ವ ವಿವರವನ್ನು ನೋಂದಾಯಿಸತಕ್ಕದ್ದು. ವಿವರಕ್ಕೆ ಸಂಪರ್ಕಿಸುವ ಮೊಬೈಲ್: 7619647531 / 7892956667.

error: Content is protected !!