ಜಿಲ್ಲಾಡಳಿತದಿಂದ ಇಂದು ರಾಜ್ಯೋತ್ಸವ

ಜಿಲ್ಲಾಡಳಿತದ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಇದಕ್ಕೂ ಮುನ್ನ ಬೆಳಿಗ್ಗೆ 8.30 ಕ್ಕೆ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದ ಆವರಣದಲ್ಲಿ ತಾಯಿ ಭುವನೇಶ್ವರಿ  ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಾಗುವುದು.  ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಂ.ಸಿದ್ದೇಶ್ವರ,  ಶಾಸಕರುಗಳಾದ ಕೆ.ಎಸ್.ಬಸವಂತಪ್ಪ ಮತ್ತಿತರರು ಭಾಗವಹಿಸುವರು.

error: Content is protected !!