ಗಾಜಿನ ಮನೆಯಲ್ಲಿ ಇಂದಿನಿಂದ ಸಾಂಸ್ಕೃತಿಕ ಸಂಭ್ರಮ

ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು ನವೆಂಬರ್ 1 ಕ್ಕೆ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಕರ್ನಾಟಕ ಸಂಭ್ರಮ-50 ರ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಜಿಲ್ಲಾಡಳಿತವು ನಗರದ ಗಾಜಿನ ಮನೆಯಲ್ಲಿ ನವೆಂಬರ್ ತಿಂಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.  ಗಾಜಿನ ಮನೆಯಲ್ಲಿ ಸಂಜೆ 6 ಗಂಟೆಯಿಂದ ಕಾರ್ಯಕ್ರಮಗಳು ನಡೆಯಲಿದ್ದು, ನವೆಂಬರ್ 1, 4, 5, 11, 19 ಹಾಗೂ 26 ರಂದು ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಗಳು ಜರುಗಲಿವೆ. ಜಾನಪದ, ಜಾದೂ, ಸಂಗೀತ, ನೃತ್ಯ ಕಾರ್ಯಕ್ರಮಗಳು ಜರುಗಲಿವೆ. ಸಾರ್ವಜನಿಕರು, ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದು.

error: Content is protected !!