ಅಂಗನವಾಡಿಗೆ ಮೊಟ್ಟೆ ವಿತರಣೆಯಲ್ಲಿ ವಿಳಂಬ: ಖಂಡನೆ

ದಾವಣಗೆರೆ, ನ. 5- ಅಂಗನವಾಡಿ ಕೇಂದ್ರಗಳಿಗೆ ಕಳೆದ ಒಂದು ತಿಂಗಳಿಂದ ಮೊಟ್ಟೆ ವಿತರಣೆಯಲ್ಲಿ ವಿಳಂಬ ಮಾಡುತ್ತಿರುವುದನ್ನು ಎಐಡಿಎಸ್‌ಓ ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಜಯ್‌ ಕಾಮತ್ ಖಂಡಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಅಸಂಖ್ಯಾತ ಬಡ ಮಕ್ಕಳು ಇದರ ಮೇಲೆ ಅವಲಂಬಿತರಾಗಿದ್ದಾರೆ. ಹೀಗಿದ್ದು ರಾಜ್ಯ ಸರ್ಕಾರ ಹಣಕಾಸು ಕೊರತೆಯ ನೆಪವೊಡ್ಡಿ ವಿತರಣೆಯಲ್ಲಿ ವಿಳಂಬ ಮಾಡಿರುವುದು ಖಂಡನಾರ್ಹ ಎಂದಿದ್ದಾರೆ.

ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಬಿಸಿಯೂಟದ ಜೊತೆಗೆ  ಮೊಟ್ಟೆ ವಿತರಿಸುತ್ತಿರುವುದು ಉತ್ತಮ ಕಾರ್ಯವಾಗಿದ್ದು, ಮೊಟ್ಟೆ ನೀಡುವ ದಿನಗಳಲ್ಲಿ ಹಾಜರಾತಿ ಹೆಚ್ಚಿರುವುದು ಅದರ ಮೇಲಿನ ಅವಲಂಬನೆ ಎಷ್ಟಿದೆ ಎಂಬುದನ್ನು ಎತ್ತಿ ತೋರಿಸುತ್ತಿದೆ ಎಂದು ಹೇಳಿದ್ದಾರೆ.

ಬಡ ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಯಾವುದೇ ಸರ್ಕಾರದ ಆದ್ಯ ಜವಾಬ್ದಾರಿಯಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೂಡಲೇ ಮಕ್ಕಳಿಗೆ ಮೊಟ್ಟೆ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸಮಿತಿ ಸರ್ಕಾರವನ್ನು ಒತ್ತಾಯಿಸಿದೆ ಎಂದು ಅಜಯ್ ಕಾಮತ್ ತಿಳಿಸಿದ್ದಾರೆ. 

error: Content is protected !!