ದಾವಣಗೆರೆ, ನ. 6- ನಗರದ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಮಹಿಳಾ ಸಂಘದಲ್ಲಿ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಜಿಲ್ಲೆಯ ಆಸಕ್ತ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ ಇದೇ ದಿನಾಂಕ 15 ರಿಂದ 24 ರವರೆಗೆ ಉದ್ಯಮ ಶೀಲತಾಭಿವೃದ್ಧಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ (ಬೆಂಗಳೂರು) ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ (ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಈ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ವಿವರಕ್ಕೆ ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಪ್ಲಾಟ್ ನಂ: 76ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ. ರಸ್ತೆ, ದಾವಣಗೆರೆ. ತರಬೇತಿದಾರರಾದ ವಿನಯ ಜಿ.ಕೆ. ಮೊ.ಸಂ: 98861 15200 ಹಾಗೂ ಬಸವರಾಜ ಜಿ. ಬಿ. ಮೊ.ಸಂ: 91647 42033 ಸಂಪರ್ಕಿಸಲು ಸಿಡಾಕ್‍ನ ಜಿಲ್ಲಾ ಜಂಟಿ ನಿರ್ದೇಶಕರು ಆರ್.ಪಿ. ಪಾಟೀಲ್ ತಿಳಿಸಿದ್ದಾರೆ.