ರಾಜ್ಯ ಸರ್ಕಾರದ ನಿರ್ಧಾರದಿಂದ ರೈತರಿಗೆ ಹೊರೆ: ಆಮ್ ಆದ್ಮಿ

ದಾವಣಗೆರೆ, ನ.7-  ರಾಜ್ಯ ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್‌ಫಾರ್ಮರ್‌ ಸಹಿತ ಉಚಿತ ಮೂಲ ಸೌಕರ್ಯ ಯೋಜನೆ ಮುಂದುವರೆಸುವಂತೆ ಹಾಗೂ ಕೇಂದ್ರ ಸರ್ಕಾರವು ಸೋಲಾರ್ ಪಂಪ್‌ಸೆಟ್‌ಗಳಿಗೆ ನೀಡವ ಸಬ್ಸಿಡಿ ಹಚ್ಚಿಸುವಂತೆ ಜಿಲ್ಲಾ ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ, ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರ ಹಿತಾಸಕ್ತಿ ಕಾಪಾಡುವ ಕಾನೂನು ಜಾರಿಗೆ ತರದೇ ರೈತರನ್ನು ಮತ್ತಷ್ಟು ಸಾಲದ ಸುಳಿಗೆ ಸಿಲುಕಿಸುವ ಕಾಯ್ದೆಗಳನ್ನಾಗಿ ಪರಿವರ್ತಿಸಿವೆ ಎಂದು ಆರೋಪಿಸಿದರು.

ರಾಜ್ಯ ಸರ್ಕರವು ಸೆ.22ರ ನಂತರ ರೈತರು ತಮ್ಮ ಸ್ವಂತ ಹಣದಲ್ಲಿಯೇ ಟ್ರಾನ್ಸ್‌ಫಾರ್ಮರ್, ವಿದ್ಯುತ್ ಕಂಬ ಪಡೆದುಕೊಳ್ಳುವಂತೆ ಆದೇಶಿಸಿದ್ದು, ಇದರಿಂದ ಪ್ರತಿ ರೈತರಿಗೆ 2.50 ಲಕ್ಷ ರೂ. ಖರ್ಚಾಗುತ್ತದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗುತ್ತಾರೆ. ಸರ್ಕಾರ ಕೂಡಲೇ ಈ ನಿರ್ಧಾರ ಕೈ ಬಿಡಬೇಕು ಎಂದು ಹೇಳಿದರು. ಸರ್ಕಾರ ರೈತರಿಗೆ ಅತಿ ಕಡಿಮೆ ದರದಲ್ಲಿ ಟ್ರಾನ್ಸ್‌ ಫಾರ್ಮರ್ ಹಾಗೂ ವಿದ್ಯುತ್ ಕಂಬಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅರುಣಕುಮಾರ್ ಸಿ.ಆರ್., ಆದಿಲ್ ಖಾನ್, ರವೀಂದ್ರ, ಸುರೇಶ್ ಸಿಡ್ಲಪ್ಪ, ಧರ್ಮನಾಯ್ಕ ಇತರರಿದ್ದರು.

error: Content is protected !!