ದಾವಣಗೆರೆ, ನ. 8 – ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿ.9 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಹೀಗಾಗಿ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಗಳಲ್ಲಿರುವ ಎಲ್ಲಾ ನ್ಯಾಯಾಲಯಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಲೋಕ್ ಅದಾಲತ್ತನ್ನು ಆಯೋಜಿಸಲಿವೆ.
ಈ ಲೋಕ್ ಅದಾಲತ್ತಿನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ರಾಜೀಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ 08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ 08192-296885, ಹೆೊನ್ನಾಳಿ 08188-251732, ಚನ್ನಗಿರಿ 08189-229195 ಮತ್ತು ಜಗಳೂರು 08196-227600 ದೂರವಾಣಿ ಗಳಿಗೆ ಸಂಪರ್ಕಿಸಬಹುದೆಂದು ಹಿರಿಯ ಸಿವಿಲ್ ನ್ಯಾಯಾ ಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ತಿಳಿಸಿದ್ದಾರೆ.