ದಾವಣಗೆರೆ, ನ. 9- ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮತ್ತು ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ 2023-24 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿ ನಾಡಿದ್ದು ದಿನಾಂಕ 11 ಹಾಗೂ 12 ರಂದು ಎರಡು ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಜಿ. ಕರಿಸಿದ್ಧಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದಿನಾಂಕ 11 ರಂದು ಬೆಳಿಗ್ಗೆ 10 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸ ಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಂ. ಸಿದ್ಧೇಶ್ವರ ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು, ಪಾಲಿಕೆ ಆಯುಕ್ತರು, ಶಿಕ್ಷಣ ಇಲಾಖೆ ನಿರ್ದೇಶಕರು ಆಗಮಿಸಲಿದ್ದಾರೆಂದು ಮಾಹಿತಿ ನೀಡಿದರು.
ಈ ಪಂದ್ಯಾವಳಿಗೆ ರಾಜ್ಯದ 33 ಜಿಲ್ಲೆಗಳಿಂದ 396 ಬಾಲಕಿಯರು, 396 ಬಾಲಕರು ಮತ್ತು ಪ್ರತಿ ಜಿಲ್ಲಾ ತಂಡದಿಂದ 66 ಟೀಂ ಮ್ಯಾನೇಜರ್‌ಗಳು ಆಗಮಿಸಲಿದ್ದಾರೆ ಎಂದರು.
ನ. 10 ರ ಸಂಜೆಯೊಳಗೆ ವಿವಿಧ ಜಿಲ್ಲೆಗಳಿಂದ ಆಗಮಿಸುವ ಬಾಲಕರಿಗೆ ನಗರದ ಬಾಲಕರ ಸರ್ಕಾರಿ ಪ್ರೌಢಶಾಲೆ, ಸೀತಮ್ಮ ಕಾಲೇಜು, ಮೋತಿ ವೀರಪ್ಪ ಕಾಲೇಜುಗಳಲ್ಲಿ ವಸತಿ ಸೌಕರ್ಯ ಕಲ್ಪಿ ಸಲಾಗಿದೆ. ಎಲ್ಲಾ ಜಿಲ್ಲೆಗಳ ಬಾಲಕಿಯರಿಗೆ ಸಂಪೂ ರ್ಣವಾಗಿ ಸಿದ್ಧಗಂಗಾ ಕಾಲೇಜಿನಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಸ್ಟಿನ್ ಡಿಸೋಜ, ಡಾ. ಡಿ.ಎಸ್. ಜಯಂತ್, ಡಿ.ಎಸ್. ಹೇಮಂತ್, ಶಿವಪ್ಪ, ಕುಮಾರ್ ನಾಯ್ಕ, ಪ್ರದೀಪ್, ಶೇಖರಪ್ಪ ಉಪಸ್ಥಿತರಿದ್ದರು.