ದಾವಣಗೆರೆ ತಾಲ್ಲೂಕಿನ ಗೊಲ್ಲರಹಳ್ಳಿಯ ಶ್ರೀ ಕುಕ್ಕುವಾಡೇಶ್ವರಿ ದೇವಿಯ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಮತ್ತು ದೇವಸ್ಥಾನದ ಉದ್ಘಾಟನಾ ಸಮಾರಂಭವು ಇಂದು ನಡೆಯಲಿದೆ.
ಇಂದು ಬೆಳಿಗ್ಗೆ 7.30 ರಿಂದ ದೇವತಾಮೂರ್ತಿಯ ಪ್ರತಿಷ್ಠಾಪನೆ, ಬೆಳಿಗ್ಗೆ 10 ಗಂಟೆಗೆ ಕಳಸಾರೋಹಣ ನಡೆಯಲಿದ್ದು, ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮತ್ತು ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ವಹಿಸುವರು.
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಉದ್ಘಾಟನೆ ನೆರೆವೇರಿಸಲಿದ್ದು, ಮಾಜಿ ಶಾಸಕ ಎಸ್.ವಿ ರಾಮಚಂದ್ರ, ಗೋ ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಬಿ.ಟಿ. ಸಿದ್ದಪ್ಪ, ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಬಿ. ವೀರಣ್ಣ, ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್ ಸೇರಿದಂತೆ ಮತ್ತಿತರರು ಮುಖ್ಯ ಅತಿಥಿಗಳಾಗಿ
ಪಾಲ್ಗೊಳ್ಳುವರು.