ದಾವಣಗೆರೆ: ಪ್ರೀತಿ ಆರೈಕೆ ಟ್ರಸ್ಟ್ ಮತ್ತು ಆರೈಕೆ ಆಸ್ಪತ್ರೆಯ ಸಂಯುಕ್ತಾಶ್ರದಲ್ಲಿ ದಾವಣಗೆರೆ ಜಿಲ್ಲಾದ್ಯಂತ ನಡೆಯುತ್ತಿರುವ ಪ್ರೀತಿ ಆರೈಕೆ ಆರೋಗ್ಯ ಉಚಿತ ಶಿಬಿರವು ಜಗಳೂರು ತಾ. ಅಣಬೂರಿನಲ್ಲಿ ಇಂದು ಬೆಳಿಗ್ಗೆ 9 ಕ್ಕೆ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಆರಂಭವಾಗಲಿದೆ. ಶಿಬಿರವನ್ನು ಶಾಸಕ ಬಿ. ದೇವೇಂದ್ರಪ್ಪ ಅವರು ಉದ್ಘಾಟಿಸಲಿದ್ದು, ಗ್ರಾ.ಪಂ ಅಧ್ಯಕ್ಷ ಸಿದ್ಧಪ್ಪ ಅವರು ಅಧ್ಯಕ್ಷತೆ ವಹಿಸುವರು.
December 29, 2024