ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮತ್ತು ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿಯು ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಮತ್ತು ನಾಳೆ ನಡೆಯಲಿದೆ. ಇಂದು ಬೆಳಿಗ್ಗೆ 10 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಂ. ಸಿದ್ಧೇಶ್ವರ ಸೇರಿದಂತೆ ಇತರರು ಭಾಗವಹಿಸುವರು.
February 23, 2025