ರಾಜ್ಯದಲ್ಲಿ ಬಿ.ವೈ. ವಿಜಯೇಂದ್ರ ಬಿಜೆಪಿಯ ನೂತನ ಸಾರಥ್ಯ ವಹಿಸಿ ಕೊಂಡಿದ್ದು, ಅವರ ಮುಖಂಡತ್ವ ದಲ್ಲಿ ಪಕ್ಷ ಸಂಘಟನೆ ಬಲಿಷ್ಠವಾಗಲಿ ದೆ. ಪಕ್ಷದಲ್ಲಿ ಸಣ್ಣಪುಟ್ಟ ಅಸಮಾ ಧಾನಗಳಿಗೆ ತೆರೆ ಎಳೆಯಲಾಗು ವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವುದು ಪಕ್ಷದ ಗುರಿಯಾಗಿದೆ ಎಂದರು.
ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷ ಸಂಘಟನೆ ಕಡೆ ಹೆಚ್ಚು ಒತ್ತು ನೀಡಿ, ಕರ್ನಾಟಕದಲ್ಲಿ 28 ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.
ದಾವಣಗೆರೆ, ನ.16- ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಬಿಜೆಪಿ ಶಿಕ್ಷಣ ಸಂಸ್ಥೆ, ಸಾರ್ವಜನಿಕ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ಇಂದು ಆರಂಭಿಸಿದ್ದು ಇದೇ ದಿನಾಂಕ 30 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.
ಯಾವುದೇ ಒಂದು ರಾಷ್ಟ್ರ ಸ್ವಾತಂತ್ರ್ಯ ಪಡೆದ ನಂತರ ಶಿಕ್ಷಣ ನೀತಿ ರೂಪಿಸು ವುದು ಸಹಜ. ಆದರೆ ನಮ್ಮ ದೇಶದಲ್ಲಿ ಇಂದಿರಾಗಾಂಧಿ ಮತ್ತು ರಾಜೀವ್‌ಗಾಂಧಿ ಅವರ ಆಡಳಿತದ ಅವಧಿಯಲ್ಲಿ ಶಿಕ್ಷಣ ನೀತಿ ಅನುಷ್ಠಾನಗೊ ಳಿಸಲಾಗಿತ್ತು. ಆಗ ವಿರೋಧಿಸ ದವರು ಈಗ ರಾಜ್ಯದಲ್ಲಿ ವಿರೋಧಿಸುತ್ತಿರುವುದು ಏಕೆ ? ಎಂದು ಪ್ರಶ್ನಿಸಿದರು.
ಸಾಕಷ್ಟು ಅಧ್ಯಯನ ಮಾಡಿದ ನಂತರವೇ ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು, ಅದರಲ್ಲೂ ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಅವರ ಆಡಳಿತದಲ್ಲಿ ಈ ನೀತಿಯನ್ನು ಜಾರಿಗೊಳಿಸಿದ್ದರು. ಉತ್ತಮ ಅಂಶಗಳನ್ನು ಒಳಗೊಂಡಿರುವ ಎನ್‌ಇಪಿಯನ್ನು ರಾಜಕೀಯ ಕಾರಣಕ್ಕಾಗಿ ತಿರಸ್ಕರಿಸಿರುವುದು ಸರಿಯಲ್ಲ ಎಂದರು. ರಾಜ್ಯದ ಕಾಂಗ್ರೆಸ್ ಸರ್ಕಾರ ಎಸ್‌ಇಪಿ (ರಾಜ್ಯ ಶಿಕ್ಷಣ ನೀತಿ) ಜಾರಿಗೆ ತರುವುದಾಗಿ ಹೇಳಿದೆಯಾದರೂ ಇನ್ನೂ ಅನುಷ್ಠಾನಗೊಳಿಸಿಲ್ಲ. ತರುವುದಾದರೆ, ತಜ್ಞರ ತಂಡವನ್ನು ರಚಿಸಿ, ಅದರ ಸಾಧಕ, ಬಾಧಕಗಳ ಬಗ್ಗೆ ಚರ್ಚಿಸಲಿ ಎಂದು ಹೇಳಿದರು. ಪ್ರಜೆಗಳ ತೀರ್ಮಾನವೇ ಅಂತಿಮವಾಗಿದ್ದು, ಈ ಕುರಿತು ಪ್ರಜೆಗಳ ಬಳಿಗೆ ಹೋಗಿ ಸಹಿ ಸಂಗ್ರಹ ಅಭಿಯಾನ ನಡೆಸಲಾಗುತ್ತಿದ್ದು, ಬೂತ್ ಮಟ್ಟದಿಂದ ವಾರ್ಡ್ ಮಟ್ಟದವರೆಗೆ ಜಾಗೃತಿ ಮೂಡಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಮುಖಂಡರಾದ ಮಂಜಾನಾಯ್ಕ, ಶಿವರಾಜ್ ಪಾಟೀಲ್, ಸುರೇಶ್, ದುರುಗೇಶ್, ಹೆಚ್.ಪಿ. ವಿಶ್ವಾಸ್ ಉಪಸ್ಥಿತರಿದ್ದರು.