ದಾವಣಗೆರೆ, ನ. 19 – ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಹಾಲು ಉತ್ಪಾದಕರಿಗೆ ಒಂದು ಮಿಶ್ರತಳಿ ಹಸು ಘಟಕ ಅನುಷ್ಠಾನಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿಗೆ ವಿಶೇಷ ಘಟಕ ಯೋಜನೆಯಡಿ 4 ಗುರಿಗಳು ಮತ್ತು ಗಿರಿಜನ ಉಪಯೋಜನೆಯಡಿ 6 ಗುರಿ ನಿಗಡಿಪಡಿಸಲಾಗಿದೆ. ಒಂದು ಮಿಶ್ರ ತಳಿ ಹಸು ಘಟಕದ ವೆಚ್ಚ ರೂ.65,000/- ಇದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ( ಶೇ 90) ರೂ.58,500/- ಸಹಾಯ ಧನ ಹಾಗೂ ( ಶೇ 10) ರೂ.6500. ಫಲಾನುಭವಿಗಳ ವಂತಿಗೆ ಅಥವಾ ಬ್ಯಾಂಕಿನ ಸಾಲದೊಂದಿಗೆ ಅನುಷ್ಠಾನಗೊಳಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡು ಕಡ್ಡಾಯವಾಗಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಆಸಕ್ತರನ್ನು ಆಯ್ಕೆ ಮಾಡಲಾಗುವುದು, ಮಹಿಳೆಯರಿಗೆ ಶೇ. 3.3 ರಫ್ತು ಮತ್ತು ಅಂಗವಿಕಲರಿಗೆ ಶೇ 3 ರಷ್ಟು ಆದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ಆರ್.ಡಿ, ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪಶು ವೈದ್ಯ ಸಂಸ್ಥೆಗಳನ್ನು ಸಂಪರ್ಕಿಸಲು ಪಶುಪಾಲನಾ ಇಲಾಖೆಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.