ದಾವಣಗೆರೆ. ನ.20- ದಾವಣಗೆರೆ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರಾಗಿ ಪ್ರೊ. ಸಿ.ಕೆ.ರಮೇಶ್ ಅವರು ನೇಮಕಗೊಂಡಿದ್ದಾರೆ. ಇದುವರೆಗೆ ಪರೀಕ್ಷಾಂಗ ಕುಲಸಚಿವರಾಗಿದ್ದ ಡಾ.ಕೆ.ಶಿವಶಂಕರ್ ಅವರಿಂದ ಪ್ರೊ.ರಮೇಶ್ ಅವರು ಅಧಿಕಾರ ಸ್ವೀಕರಿಸಿದರು.
ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಡಾ.ಶಿವಶಂಕರ್ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ತಮ್ಮ ಮಾತೃ ವಿಭಾಗಕ್ಕೆ ವಾಪಸ್ಸಾದರು.