ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಇಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 2 ಕ್ಕೆ ಜಗಳೂರಿಗೆ ಆಗಮಿಸಿ, ತಾಲ್ಲೂಕು ವ್ಯಾಪ್ತಿಯ ಬರಪರಿಹಾರ ಕಾಮಗಾರಿಗಳು, ಕುಡಿಯುವ ನೀರಿನ ಯೋಜನೆಗಳ ಕುರಿತು ಸ್ಥಳ ಪರಿಶೀಲನೆ ನಡೆಸುವರು. ಮಧ್ಯಾಹ್ನ 3 ಕ್ಕೆ ಜಗಳೂರು ತಾ.ಪಂ. ಸಭಾಂಗಣದಲ್ಲಿ ಬರಪರಿಹಾರ ಕಾರ್ಯ ಕ್ರಮಗಳ ಪರಿಶೀಲನಾ ಸಭೆ ಮತ್ತು ಜಗಳೂರು ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 5 ಕ್ಕೆ ಜಗಳೂರು ತಾಲ್ಲೂಕಿನ ಪಕ್ಷದ ಕಾರ್ಯಕರ್ತರ ಭೇಟಿ ಮಾಡುವರು. ಸಂಜೆ 6.45 ಕ್ಕೆ ದಾವಣಗೆರೆಗೆ ಆಗಮಿಸಿ, ವಾಸ್ತವ್ಯ ಹೂಡುವರು.
December 23, 2024