ರಾಣೇ ಬೆನ್ನೂರು, ನ. 20- ಶಾಸಕ ಪ್ರಕಾಶ ಕೋಳಿವಾಡ ಅಧ್ಯಕ್ಷತೆ ಯಲ್ಲಿ ಇಲ್ಲಿನ ತಾ.ಪಂ. ಸಭಾಭವನದಲ್ಲಿ ಇದೇ ದಿನಾಂಕ 24 ರಂದು ಬೆಳಿಗ್ಗೆ 11ಗಂಟೆಗೆ ಸರ್ಕಾರದ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ತಹಶೀಲ್ದಾರ್ ಹನುಮಂತಪ್ಪ ಶಿರಹಟ್ಟಿ ತಿಳಿಸಿದ್ದಾರೆ. ಅಂದು ತಾಲ್ಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ತಮ್ಮ ಕುಂದು-ಕೊರತೆಗಳ ಅರ್ಜಿ ಹಾಗೂ ಅಹವಾಲುಗಳನ್ನು ಸಲ್ಲಿಸಿ ಸ್ಥಳದಲ್ಲಿಯೇ ಪರಿಹಾರ ಪಡೆಯಲು ಅವಕಾಶವಿದ್ದು, ಅಂದು ಸಾರ್ವಜನಿಕರು ಭಾಗವಹಿಸುವಂತೆ ತಹಶೀಲ್ದಾರ್ ಮನವಿ ಮಾಡಿದ್ದಾರೆ.
January 23, 2025