ವಿಶ್ವ ವಿಕಲಚೇತನರಿಗಾಗಿ ಕ್ರೀಡಾ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವನ್ನು ಮೋತಿ ವೀರಪ್ಪ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ-ಸಂಸ್ಥೆಗಳು ಸಹಯೋಗದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣವರ ಉದ್ಘಾಟಿಸುವರು. ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ವಾಸಂತಿ ಉಪ್ಪಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಆರ್. ಜಯಲಕ್ಷ್ಮಿಬಾಯಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಂಜುಳ.ಎಂ.ಪಿ, ಮೋತಿ ವೀರಪ್ಪ ಕಾಲೇಜಿನ ಪ್ರಾಂಶುಪಾಲ ಪಂಚಾಕ್ಷರಪ್ಪ ಎಸ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ವಿಶ್ವ ವಿಕಲಚೇತನರ ದಿನಾಚರಣೆ ಸಮಿತಿಯ ಸದಸ್ಯ ಕಾರ್ಯದರ್ಶಿ ಡಾ.ಕೆ.ಕೆ ಪ್ರಕಾಶ್ ಭಾಗವಹಿಸಲಿದ್ದಾರೆ.