ವಿನಾಯಕ ಎಜುಕೇಶನ್ ಟ್ರಸ್ಟ್ನ ಬಿಎಸ್ ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಿದ್ಯಾರ್ಥಿ ಸಂಘ, ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್ ಘಟಕ, ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಸಮಾರಂಭವನ್ನು ಇಂದು ಬೆಳಿಗ್ಗೆ 11 ಕ್ಕೆ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಯು.ಎಸ್. ಮಹಾಬಲೇಶ್ವರ ಸಮಾರಂಭವನ್ನು ಉದ್ಘಾಟಿಸಲಿದ್ದು, ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜಿನ ಅಧ್ಯಕ್ಷ ಬಿ.ಸಿ. ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿನಾಯಕ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಎನ್.ಎ. ಮುರುಗೇಶ್, ಪಿಇಎಸ್ ಶಾಲೆಯ ಅಧ್ಯಕ್ಷ ಆರ್. ವೆಂಕಟರೆಡ್ಡಿ ಆಗಮಿಸಲಿದ್ದಾರೆ. ಬಿ.ಎಸ್.ಸಿ ಕಾಲೇಜಿನ ಪ್ರಾಂಶುಪಾಲ ಎಂ.ಸಿ. ಗುರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.